ಗುಜರಾತ್ ನ ರಾಜಕೋಟ್ ಗೇಮಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ನಡೆದಿದೆ. ಘಟನೆಯಲ್ಲಿ ಆರು ಮಕ್ಕಳು ಅಸುನೀಗಿದ್ದು, ಹಲವರು ಗಾಯಗೊಂಡಿದ್ದಾರೆ.
ಶನಿವಾರ ರಾತ್ರಿ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆ – ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಒಟ್ಟು 11 ಶಿಶುಗಳನ್ನು ರಕ್ಷಿಸಲಾಗಿದೆ. ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ.
ಅಗ್ನಿಶಾಮಕ ಇಲಾಖೆಗೆ ರಾತ್ರಿ 11:32 ಕ್ಕೆ ದುರಂತದ ಕರೆ ಬಂದಿದೆ ಎಂದು ಅಗ್ನಿಶಾಮಕ ಅಧಿಕಾರಿ ರಾಜೇಂದ್ರ ಅತ್ವಾಲ್ ತಿಳಿಸಿದ್ದಾರೆ. “ಒಟ್ಟು 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ಎರಡು ಕಟ್ಟಡಗಳಿಗೆ ಬೆಂಕಿ ತಾಗಿದೆ, ಒಂದು ಆಸ್ಪತ್ರೆ ಕಟ್ಟಡ ಮತ್ತು ಬಲಭಾಗದಲ್ಲಿರುವ ವಸತಿ ಕಟ್ಟಡದ ಎರಡು ಮಹಡಿಗಳು ಸಹ ಬೆಂಕಿಗೆ ಆಹುತಿಯಾಗಿದೆ. 11-12 ಜನರು ಅವರನ್ನು ರಕ್ಷಿಸಲಾಯಿತು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು” ಎಂದಿದ್ದಾರೆ.