Visitors have accessed this post 474 times.
ಹಾಸನ : ಇಂದು ಬೆಳ್ಳಂ ಬೆಳಗ್ಗೆ ಹಾಸನದ ಹೊರವಲಯ ಈಚನಹಳ್ಳಿಯಲ್ಲಿ ಪ್ರಕಡಿಕೆಯಾಗಿ ಕಾಡಿನಲ್ಲಿದ್ದ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ, ಅಪಘಾತದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳನ್ನು ಇಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಭೇಟಿ ಮಾಡಿ ಸಾಂತ್ವನ ಹೇಳಿದರು.
ಅಪಘಾತದಲ್ಲಿ ತಂದೆ ತಾಯಿ ಕಳೆದುಕೊಂಡು ಅನಾಥರಾಗಿರುವ ಇಬ್ಬರು ಬಾಲಕಿಯರು ಎಂದು ಹೇಳಲಾಗುತ್ತಿದೆ. ಚಿಕ್ಕಬಳ್ಳಾಪುರ ತಾಲೂಕಿನ ಚಿಗಟೇನಹಳ್ಳಿ ಅಜ್ಜಿಯ ಮನೆಯಲ್ಲಿರುವ ಇಬ್ಬರು ಬಾಲಕಿಯರನ್ನು ಭೇಟಿ ಮಾಡಿ ಶಾಸಕ ಪ್ರದೀಪ್ ಈಶ್ವರ್ ಸಾಂತ್ವನ ಹೇಳಿದ್ದಾರೆ.
ಶಾಸಕ ಪ್ರದೀಪ ಈಶ್ವರ ಪಲ್ಲವಿ ಹಾಗೂ ಪೂರ್ಣಿಮಾಳಿಗೆ ಸಾಂತ್ವನ ಹೇಳಿದ್ದು ಅಲ್ಲದೆ, ಇಬ್ಬರ ಹೆಸರಿನಲ್ಲಿ ತಲಾ ಒಂದು ಲಕ್ಷ ಪೋಸ್ಟಲ್ ಡಿಪಾಸಿಟ್ ಮಾಡುವ ಭರವಸೆ ನೀಡಿದ್ದಾರೆ. ಅದರ ಜೊತೆಗೆ ಉಚಿತ ವಿದ್ಯಾಭ್ಯಾಸ ಕೊಡಿಸುವುದಾಗಿ ಪ್ರದೀಪ್ ಈಶ್ವರ್ ಭರವಸೆ ನೀಡಿದ್ದಾರೆ.
ಘಟನೆ ಹಿನ್ನೆಲೆ?
ಹಾಸನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಗು ಸೇರಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನದ ಹೊರ ವಲಯ ಈಚನಹಳ್ಳಿಯಲ್ಲಿ ಟ್ರಕ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಟ್ರಕ್ ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮೂವರು ಮಹಿಳೆಯರು, ಇಬ್ಬರು ಪುರುಷರು ಸೇರಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.