ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ.
ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.