
ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದಡಿ ಅವರ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಶಾಸಕ ಹರೀಶ್ ಪೂಂಜಾ ಅವರ ವರ್ತನೆ ವಿರುದ್ದ ಹೈಕೋರ್ಟ್ ತೀವ್ರ ಅಸಮಾಧಾನವನ್ನು ಹೊರ ಹಾಕಿದೆ.



ಅರ್ಜಿ ವಿಚಾರಣೆ ನಡೆಸಿದ ಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠವು ಪೊಲೀಸ್ ಠಾಣೆಗೆ ಏಕೆ ಹೋಗಿದ್ದು?
ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಬಹುದೇ? ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ಹೋಗಿ ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇದನ್ನೆಲ್ಲಾ ಒಪ್ಪಲು ಆಗುವುದಿಲ್ಲ. ನಾಳೆ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನೋಡಲು ಕೋರ್ಟ್ ಬಂದು ನಮ್ಮ ಮುಂದೆ ಕೂತರೆ ಹೇಗೆ? ಆಗ ಏನು ಮಾಡುವುದು ಅಂತ ತಮ್ಮ ಅಸಮಧಾನವನ್ನು ಹೊರ ಹಾಕಿದ್ದಾರೆ. ಈ ನಡುವೆ ನಂತರ ಅರ್ಜಿಯಲ್ಲಿ ಪ್ರತಿವಾದಿಯಾದ ಬೆಳ್ತಗಂಡಿ ಠಾಣಾ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.