Visitors have accessed this post 678 times.
ನವದೆಹಲಿ: ಇಂಡಿಯಾ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ 295 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಭೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ ಬಗ್ಗೆ ಚರ್ಚಿಸಿದ್ದೇವೆ. ಎರಡೂವರೆ ಗಂಟೆ ಕಾಲ ಮೈತ್ರಿಕೂಟದ ನಾಯಕರು ಚರ್ಚಿಸಿದ್ದೇವೆ. ಇಂಡಿಯಾ ಮೈತ್ರಿಕೂಟ 295 ಕ್ಷೇತ್ರ ಗೆಲ್ಲಲಿದೆ. ಇದು ಜನತೆ ಮಾಡಿರುವ ಸರ್ವೆ, ಜನರು ನಮಗೆ ಮಾಹಿತಿ ನೀಡಿದ್ದಾರೆ. ಆಡಳಿತದಲ್ಲಿರುವ ಸರ್ಕಾರಗಳು ಸರ್ವೆ ನಡೆಸುತ್ತಿರುತ್ತವೆ. ಆದರೆ ನಮ್ಮದು ಸತ್ಯದ ಸರ್ವೆ, ನಾವು 295 ಸ್ಥಾನ ಗೆಲ್ಲುತ್ತೇವೆ’ ಎಂದು ತಿಳಿಸಿದ್ದಾರೆ.