ಲೈಂಗಿಕ ದೌರ್ಜನ್ಯ ಪ್ರಕರಣ : ಮಹಿಳಾ ಅಧಿಕಾರಿಗಳಿಂದಲೇ ʻಪ್ರಜ್ವಲ್‌ ರೇವಣ್ಣʼ ವಿಚಾರಣೆ

ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸದ್ಯ ಎಸ್‌ ಐಟಿ ಅಧಿಕಾರಿಗಳ ವಶದಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ.

ಸದ್ಯ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರಜ್ವಲ್‌ ರೇವಣ್ಣರನ್ನು ಮಹಿಳಾ ಅಧಿಕಾರಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದ ವಿಚಾರಣೆಯನ್ನು ಎಸ್‌ ಐಟಿ ಮಹಿಳಾ ಅಧಿಕಾರಿಗಳ ಹೆಗಲಿಗೆ ವಹಿಸಲಾಗಿದ್ದು, ಪ್ರಜ್ವಲ್ ರೇವಣ್ಣರನ್ನ SIT ಕಚೇರಿಗೆ ಜೀಪ್​ನಲ್ಲಿ ಕರೆತಂದಿದ್ದು ಮಹಿಳಾ ಅಧಿಕಾರಿಗಳು. ಪ್ರಜ್ವಲ್ ರೇವಣ್ಣ ಅವರು ಇದ್ದ ಜೀಪ್​ನಲ್ಲಿ ಚಾಲಕ ಹೊರತು ಪಡಿಸಿದರೆ ಉಳಿದ ಐವರು ಮಹಿಳಾ ಅಧಿಕಾರಿಗಳೆ ಇದ್ದರು. ಎಸ್‌ಐಟಿ ಅಧಿಕಾರಿಗಳು ಮೂವರು ಮಹಿಳಾ ಪೊಲೀಸ್ ಪೇದೆಗಳ ಮೂಲಕ ಪ್ರಜ್ವಲ್‌ ಅವರನ್ನ ವಶಕ್ಕೆ ಪಡೆದಿದ್ದರು.

ಇದೀಗ ಮಹಿಳಾ ಅಧಿಕಾರಿಗಳೇ ಪ್ರಜ್ವಲ್‌ ರೇವಣ್ಣ ವಿಚಾರಣೆ ನಡೆಸಲಾಗುತ್ತಿದೆ. ಎಸ್.ಪಿ. ಸುಮನ್‌ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಸಾಕ್ಷ್ಯಾಧಾರಗಳ ಮುಂದಿಟ್ಟುಕೊಂಡು ಪ್ರಶ್ನೆಗಳನ್ನು ಕೇಳುವುದು, ಆ ಸ್ಟೇಟ್ಮೆಂಟ್‌ ಗಳನ್ನು ವಿಡಿಯೋ ರೆಕಾರ್ಡ್‌ ಮಾಡುವುದು, ಎವಿಡೆನ್ಸ್‌ ಪರಿಶೀಲನೆ ಎಲ್ಲವೂ ಮಹಿಳಾ ಅಧಿಕಾರಿಗಳೇ ಮಾಡುತ್ತಿದ್ದಾರೆ.

Leave a Reply