October 12, 2025
WhatsApp Image 2024-06-05 at 10.23.59 AM

ಹೊಸದಿಲ್ಲಿ : ಲೋಕಸಭೆ ಚುನಾವಣೆಯಲ್ಲಿ ಫಲಿತಾಂಶದ ಬಗ್ಗೆ ಬಂದ ಎಳ್ಲಾ ಚುನಾವಣಾ ಸಮೀಕ್ಷೆಗಳು ಸಂಪೂರ್ಣ ತಲೆಕೆಳಗಾಗಿದ್ದು, ಈ ನಡುವೆ ಎಕ್ಸಿಟ್ ಪೋಲ್ ಫಲಿತಾಂಶ ಉಲ್ಟಾ ಹೊಡೆದಿದ್ದಕ್ಕೆ ಆಕ್ಸಿಸ್ ಮೈ ಇಂಡಿಯಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಗುಪ್ತಾ ಇಂಡಿಯಾ ಟುಡೇ ಟಿ ವಿ ಲೈವ್ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಘಟನೆ ನಡೆದಿದೆ.

ಇಂಡಿಯಾ ಟುಡೆಯ ಚುನಾವಣಾ ಫಲಿತಾಂಶಗಳ ಲೈವ್ ಕವರೇಜ್‌ನಲ್ಲಿ ಕಾಣಿಸಿಕೊಂಡ ಗುಪ್ತಾ, ಕಣ್ಣೀರಿಡುತ್ತಿದ್ದಂತೆ ನಿರೂಪಕರು ಅವರಿಗೆ ಸಾಂತ್ವನ ಹೇಳಿದರು. ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 361-401 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದವು. INDIA ಒಕ್ಕೂಟವು 131-166 ಸ್ಥಾನಗಳನ್ನು ಗೆಲ್ಲಲಿದೆ, ಸಮೀಕ್ಷೆಗಳ ಪ್ರಕಾರ ಇತರ ಪಕ್ಷಗಳು 8 ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿತ್ತು.

About The Author

Leave a Reply