ಚುನಾವಣೆಯಲ್ಲಿ ನನ್ನ ಸೋಲಿಗೆ ಯಾರನ್ನೂ ದೂಷಿಸುವುದಿಲ್ಲ. ಸೋಲಿನ ನೈತಿಕ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ನಾನು ಸೋತರೂ ರಾಷ್ಟ್ರಮಟ್ಟದ ನಾಯಕರು ನನಗೆ ಕರೆ ಮಾಡಿ ಧೈರ್ಯ ತುಂಬಿರುವುದು ಸಂತಸ ತಂದಿದೆ.
ಇನ್ನು ಮುಂದೆ ಸುಮ್ಮನೆ ಕೂರೊದಿಲ್ಲ. ಒಂದುವರೆ ವರ್ಷದಲ್ಲೇ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುತ್ತೇನೆ ಎಂದರು.