May 6, 2026
WhatsApp Image 2024-06-06 at 2.58.17 PM

ಬೆಳ್ತಂಗಡಿ : ಗಲಾಟೆಯ ವೇಳೆ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಎಂಬಾತನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಬಿಜೆಪಿ ಮುಖಂಡನ ವಿರುದ್ಧ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಮಾನಭಂಗಕ್ಕೆ ಯತ್ನ ಪ್ರಕರಣ ಸಂಬಂಧ ಆರೋಪಿ ರಾಜೇಶ್ ಎಮ್.ಕೆ ವಿರುದ್ಧ ಜೂ.5ರಂದು ಮಾನಭಂಗ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

About The Author

Leave a Reply