April 2, 2026
WhatsApp Image 2024-06-07 at 10.19.00 AM

ಡುಪಿ: ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟಿದ್ದ ಗಾಂಜಾ ಸಹಿತ  ಕೇರಳದ ವಿದ್ಯಾರ್ಥಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಹೆರ್ಗಾ ಗ್ರಾಮದ ಅಪಾರ್ಟ್ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಪಾರ್ಟ್‌ಮೆಂಟ್‌ ರೂಮ್‌ ಮೇಲೆ ದಾಳಿ ಮಾಡಿ ತಿರುವನಂತಪುರ ಮೂಲದ ಸಿದ್ಧಾರ್ಥ್‌ (22) ಎಂಬಾತನನ್ನು ಬಂಧಿಸಲಾಗಿದೆ.

ಜೂನ್ 5ರಂದು ಸಂಜೆ 5 ಗಂಟೆಗೆ ಮಣಿಪಾಲ ಠಾಣಾ ಪೊಲೀಸ್‌ ನಿರೀಕ್ಷಕ ದೇವರಾಜ್‌ ಟಿ.ವಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಆರೋಪಿಯಿಂದ 20,000 ರೂ ಮೌಲ್ಯದ ಸುಮಾರು 388 ಗ್ರಾಂ ಗಾಂಜಾ ಹಾಗೂ 45,000 ರೂ ಮೌಲ್ಯದ ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ. ಈ ಗಾಂಜಾವನ್ನು ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಲಾಭಗಳಿಸುವ ಉದ್ದೇಶದಿಂದ ಈತ ಶೇಖರಿಸಿ ಇಟ್ಟಿದ್ದಾನೆ ಎಂದು ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ.

About The Author

Leave a Reply