February 20, 2026
WhatsApp Image 2024-06-07 at 11.37.32 AM

ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೇಸ್ ನಿಂದ ಐವನ್ ಡಿಸೋಜಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರೊಂದಿಗೆ ಮೂರು ರಾಜಕೀಯ ಪಕ್ಷಗಳ ಒಟ್ಟು 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ನಾಮಪತ್ರ ವಾಪಸ್‌ ಪಡೆಯಲು ಗುರುವಾರ ಮಧ್ಯಾಹ್ನ 3ರವರೆಗೆ ಕಾಲಾವಕಾಶವಿತ್ತು. ಯಾರೂ ನಾಮಪತ್ರ ಹಿಂದಕ್ಕೆ ಪಡೆಯದ ಕಾರಣ, ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಘೋಷಿಸಿದರು.
ಕಾಂಗ್ರೆಸ್‌ನ ಎನ್.ಎಸ್.ಬೋಸರಾಜು, ಐವನ್‌ ಡಿಸೋಜ, ಕೆ.ಗೋವಿಂದರಾಜ್‌, ಜಗದೇವ ಗುತ್ತೇದಾರ್, ಡಾ.ಯತೀಂದ್ರ, ಎ.ವಸಂತಕುಮಾರ್‌, ಬಿಲ್ಕಿಸ್‌ ಭಾನು, ಬಿಜೆಪಿಯ ಸಿ.ಟಿ.ರವಿ, ಎನ್‌.ರವಿಕುಮಾರ್‌ ಮತ್ತು ಎಂ.ಜಿ.ಮುಳೆ, ಜೆಡಿಎಸ್‌ನಿಂದ ಟಿ.ಎನ್‌.ಜವರಾಯಿಗೌಡ ಅವರು ಆಯ್ಕೆ ಆಗಿರುವ ಅಭ್ಯರ್ಥಿಗಳು.

About The Author

Leave a Reply