October 29, 2025
WhatsApp Image 2024-06-09 at 3.14.35 PM

ಶಿವಮೊಗ್ಗ : ಖಾಸಗಿ ಬಸ್‌ ಪಲ್ಟಿಯಾಗಿ 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಬಾಳು ಗ್ರಾಮದಲ್ಲಿ ನಡೆದಿದೆ.

ಸಾಗರ ಪಟ್ಟಣದಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ವೇಳೆ ಮುಂಬಾಳು ಗ್ರಾಮದ ಬಳಿ ಇರುವ ಕೆರೆಯ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ಪಲ್ಟಿಯಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಖಾಸಗಿ ಬಸ್‌ ನಲ್ಲಿ 25 ಕ್ಕೂ ಪ್ರಯಾಣಿಕರಿದ್ದರು. ಗಾಯಗೊಂಡವರನ್ನು ಆನಂದಪುರದ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗ, ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಬಳಿಕ ಆಂಬುಲೆನ್ಸ್‌ ಗೆ ಕರೆ ಮಾಡಲಾಗಿದೆ. ಆದರೆ ಸೂಕ್ತ ಸಮಯಕ್ಕೆ ಆಂಬುಲೆನ್ಸ್‌ ಬಾರದ ಹಿನ್ನೆಲೆಯಲ್ಲಿ ಗಾಯಾಳುಗಳನ್ನು ಖಾಸಗಿ ವಾಹನದಲ್ಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಆನಂದಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

About The Author

Leave a Reply