Visitors have accessed this post 1394 times.
ಉಳ್ಳಾಲ: ಉಳ್ಳಾಲದ ಇಲ್ಲಿನ ಗ್ಲೋಬಲ್ ಮಾರುಕಟ್ಟೆಯಲ್ಲಿ ನಡೆದ ಆಕಸ್ಮಿಕ ಅಗ್ನಿ ಅನಾಹುತದಲ್ಲಿ ಹಲವಾರು ಅಂಗಡಿಗಳ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ.
ಸ್ಥಳಕ್ಕೆ ಭೇಟಿ ನೀಡಿದ ಸ್ಪೀಕರ್ ಯು.ಟಿ ಖಾದರ್ ಪರಿಶೀಲನೆ ನಡೆಸಿದರು.
ಈ ಅಗ್ನಿ ಅವಘಡದಲ್ಲಿ ಮಾರುಕಟ್ಟೆ ಮೇಲೆ ಹಾಕಲಾಗಿದ್ದ ಶೀಟು, ಅಂಗಡಿಗಳಲ್ಲಿ ಆಹಾರ ಸಾಮಗ್ರಿ ಶೇಖರಣೆ ಮಾಡಿಕೊಡುವ ಕಪಾಟು, ಟೇಬಲ್ ಫ್ರೂಟ್ಸ್, ನಗದು ಸಹಿತ ಇತರ ಸಾಮಗ್ರಿಗಳು ಬೆಂಕಿಗಾಹುತಿಯಾಗಿದೆ. ಇದರಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.