ಬೆಂಗಳೂರು : ಗ್ಯಾರಂಟಿ ಯೋಜನೆಗಳ ಬಗ್ಗೆ ಅನಗತ್ಯ ಹೇಳಿಕೆಗಳನ್ನು ನೀಡದೇ ಶಾಸಕರು ಬಾಯಿ ಮುಚ್ಚಿಕೊಂಡಿದ್ದರೆ ಸಾಕು ಎಂದು ನೇರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಪಕ್ಷದ ನಾಯಕರಿಗೆ ಓಪನ್ ವಾರ್ನಿಂಗ್ ಕೊಟ್ಟಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಕ್ಷೇತ್ರಗಳಲ್ಲಿ ಗೆಲುವು ಸಾಧಿಸದಕ್ಕೆ ಉಚಿತ ಗ್ಯಾರಂಟಿ ಯೋಜನೆಗಳೇ ಕಾರಣ ಎಂಬ ಕೆಲ ಕಾಂಗ್ರೆಸ್ ಸಚಿವರ, ಶಾಸಕರ ಹೇಳಿಕೆಗಳ ಕುರಿತು ಡಿಕೆಶಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಲೋಕಸಭೆ ಚುನಾವಣೆಯ ಫಲಿತಾಂಶದ ಮೂಲಕ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದೆ. ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ನಾವೇ ಪರಾಮರ್ಶಿಸಿ ಅದನ್ನು ತಿದ್ದುಕೊಳ್ಳಬೇಕು. ಅದುಬಿಟ್ಟು ಅನಗತ್ಯ ಹೇಳಿಕೆ ನೀಡಬಾರದು ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಇನ್ನು ತಮ್ಮ ಅಭ್ಯರ್ಥಿಗಳಿಗೆ ಲೀಡ್ ಕೊಡಿಸದ ಸಚಿವರು ರಾಜೀನಾಮೆ ಪಡೆಯಲಿ ಎಂಬ ಶಾಸಕ ಬಸವರಾಜ ಶಿವಗಂಗಾ ಅವರ ಹೇಳಿಕೆಗೂ ಡಿಕೆಶಿ ಖಡಕ್ ಆಗಿಯೇ ಉತ್ತರಿಸಿದ್ದು ..ಶಾಸಕರು ಅನಗತ್ಯವಾಗಿ ಬಹಿರಂಗ ಹೇಳಿಕೆ ನೀಡಬಾರದು. ಎಲ್ಲಿ ತಪ್ಪಾಗಿದೆ ಎಂದು ಎಲ್ಲರೂ ಕೂತು ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬೇಕು ಎಂದು ವಾರ್ನ್ ಮಾಡಿದ್ದಾರೆ.