
ಶಿವಾಜಿನಗರದ ಸರ್ಕಾರಿ ಕಾಲೇಜಿನ ಹಾಸ್ಟೆಲ್ ಕೊಠಡಿಯಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನ ಶವ ಸೋಮವಾರ ಪತ್ತೆಯಾಗಿದೆ.



ರಾಜಸ್ಥಾನ ಮೂಲದ ಲೋಕೇಂದ್ರ ಕುಮಾರ್ ಸಿಂಗ್ (22) ಅವರು ಬೆಂಗಳೂರಿನ ಲೇಡಿ ಕರ್ಜನ್ ರಸ್ತೆಯಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಈ ಹಿಂದೆ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ) ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಧ್ಯಾಹ್ನ 3 ಗಂಟೆ ಸುಮಾರಿಗೆ ತರಗತಿಯಿಂದ ಹಿಂದಿರುಗಿದ ಸಿಂಗ್ ಅವರ ರೂಮ್ಮೇಟ್ ಕೋಣೆಗೆ ಬೀಗ ಹಾಕಿರುವುದನ್ನು ಕಂಡುಕೊಂಡರು. ಬಾಗಿಲು ಒಡೆದು ನೋಡಿದಾಗ, ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಿಂಗ್ ಅವರ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಅವರು ಮಂಗಳವಾರ ಬೆಂಗಳೂರಿಗೆ ಬಂದ ನಂತರ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ