ಪೊಲೀಸ್‌ ಠಾಣೆಯಲ್ಲಿ ‘ದರ್ಶನ್‌ ಫ್ಯಾನ್ಸ್‌’ ದಂಡು; ಪೊಲೀಸರಿಂದ ‘ಲಾಠಿ ಚಾರ್ಜ್‌’

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು ತಮ್ಮ ವಶಕ್ಕೆ ಪಡೆದಿರುವಂತ ಪೊಲೀಸರುವಿಚಾರಣೆ ನಡೆಸುತ್ತಿದ್ದಾರೆ. ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದರ್ಶನ್ ಅಭಿಮಾನಿಗಳ ದಂಡೇ ನೆರೆದಿದ್ದು ಹೈಡ್ರಾಮಾವೇ ನಡೆದಿದೆ.

ಹೀಗಾಗಿ ಪೊಲೀಸರಿಂದ ಅವರನ್ನು ನಿಯಂತ್ರಿಸೋದಕ್ಕೆ ಲಾಠಿ ಚಾರ್ಜ್ ಕೂಡ ಮಾಡಲಾಗಿದೆ.

ಬೆಂಗಳೂರಿಗೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಕೊಂಡು ಬಂದು, ಆತ ಮೇಲೆ ಹಲ್ಲೆ ನಡೆಸಿ, ಹತ್ಯೆಗೈದು, ಮೋರಿಗೆ ಎಸೆದಂತ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ನಿನ್ನೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ.

ಇದೀಗ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡೋದಕ್ಕೆ ಪೊಲೀಸ್ ಠಾಣೆಯ ಮುಂದೆ ಫ್ಯಾನ್ಸ್ ಭಾರೀ ದಂಡೇ ನೆರೆದಿದೆ. ಈ ವೇಳೆಯಲ್ಲಿ ನೂಕು ನುಗ್ಗಲು, ಬಿಗುವಿನ ವಾತಾವರಣ ಕೂಡ ಪೊಲೀಸ್ ಠಾಣೆಯ ಮುಂದೆ ಏರ್ಪಟ್ಟಿದೆ.

ಈ ಹಿನ್ನಲೆಯಲ್ಲಿ ನಟ ದರ್ಶನ್ ನೋಡ ಬಂದು, ಭಾರೀ ಹೈಡ್ರಾಮಕ್ಕೆ ಕಾರಣವಾದ ಹಿನ್ನಲೆಯಲ್ಲಿ ಪೊಲೀಸರು ಅಭಿಮಾನಿಗಳನ್ನು ನಿಯಂತ್ರಿಸೋದಕ್ಕೆ ಅವರ ಮೇಲೆ ಲಾಠಿ ಚಾರ್ಜ್ ನಡೆಸಿ, ಪೊಲೀಸ್ ಠಾಣೆ ಬಳಿಯಿಂದ ಚದುರಿಸಿದ್ದಾರೆ.

Leave a Reply