
ಬೆಂಗಳೂರು : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.



ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಆದೇಶ ಮಾಡಿದೆ. ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲು ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಇಂದು ವಾರಂಟ್ ಕೋರ್ಟ್ ಆದೇಶ ಹೊರಡಿಸಿದೆ. ಇನ್ನೊಂದೆಡೆ ಈ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಆದೇಶ ಕೋರಿ ಹೈಕೋರ್ಟ್‌ನಲ್ಲಿ ಸಂತ್ರಸ್ತೆ ಕುಟುಂಬ ಮನವಿ ಮಾಡಿದೆ. ಇದರಿಂದ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ.