ವಿಟ್ಲ:- ಮಸೀದಿಯಲ್ಲಿ ಶಸ್ತ್ರಾಸ್ತ್ರ ಶೇಖರಣೆ ಮಾಡಿದ್ದಾರೆ ಮತ್ತು ಮಸೀದಿಯನ್ನು ಪೋಲಿಸರು ತಪಾಸಣೆ ಮಾಡಬೇಕು ಎಂದಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾನಿಗೆ ಮಸೀದಿಯ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಇಂತಹ ಹೇಳಿಕೆಯಿಂದ ಸಮಾಜದಲ್ಲಿ ಕೋಮು ಪ್ರಚೋಧನೆಗೆ ಶಾಸಕ ಹರೀಶ್ ಪೂಂಜಾ ಅವರು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಅವರು ಆರೋಪ ಮಾಡಿದ್ದಾರೆ
ಮಸೀದಿಯ ಬಗ್ಗೆ ಮಾತನಾಡಲು ಶಾಸಕ ಪೂಂಜಾ ಅವರಿಗೆ ಯಾವುದೇ ನೈತಿಕತೆ ಇಲ್ಲ ಅಂತಹ ಸಂಶಯ ಇದ್ದರೆ ಬಹಿರಂಗ ಚರ್ಚೆಗೆ ಬರಲಿ ವೇದಿಕೆ ಸಿದ್ದಪಡಿಸೋಣ ಎಂದು ಪೂಂಜಾ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ದ.ಕ.ಜಿಲ್ಲೆಯ ಎಲ್ಲಾ ಮಸೀದಿಗಳಿಗೆ ಬೇಕಾದರೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ನಾವೇ ಕರೆದುಕೊಂಡು ಹೋಗ್ತೇವೆ ಒಂದೇ ಒಂದು ಮಸೀದಿಯಲ್ಲಿ ಶಸ್ತ್ರಾಸ್ತ್ರ ಇದ್ದರೆ ನಾನು ಸಾರ್ವಜನಿಕ ಜೀವನದಿಂದ ನಿವೃತ್ತಿ ಹೊಂದುತ್ತೇನೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಅವರು ಸವಾಲು ಹಾಕಿದ್ದಾರೆ