
ಕಾಸರಗೋಡು: ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ.



ಉಪ್ಪಳ ಐಲ ಕುದುಪುಳು ವಿನ ಹರಿಣಾಕ್ಷಿ ಸುರೇಶ್ ರವರ ಪುತ್ರಿ ಧನ್ಯಶ್ರೀ ( 19) ಮೃತಪಟ್ಟವರು. ಮಂಗಳೂರು ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು.
ಹನ್ನೆರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ತಪಾಸಣೆ ನಡೆಸಿದಾಗ ವಿಷ ಸೇವನೆ ಮಾಡಿರುವ ಬಗ್ಗೆ ತಿಳಿದುಬಂದಿತ್ತು .
ಗಂಭೀರ ಸ್ಥಿತಿಗೆ ತಲಪಿದ್ದ ಧನ್ಯಶ್ರೀಳನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದ ಹಿನ್ನಲೆಯಲ್ಲಿ ವೈದ್ಯರ ಸಲಹೆಯಂತೆ ಕಾಸರಗೋಡಿಗೆ ಕರೆದುಕೊಂಡು ಬಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೊಲೀಸರು ಮಹಜರು ನಡೆಸಿ ಮೃತದೇಹ ವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಗಿದೆ.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ