October 29, 2025
WhatsApp Image 2024-06-14 at 3.32.36 PM

ಬೆಂಗಳೂರು: ಅನಾರೋಗ್ಯದಿಂದಾಗಿ ಭೂಗತ ಪಾತಕಿ ರವಿ ಪೂಜಾರಿ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆ ಶಸ್ತ್ರಚಿಕಿತ್ಸೆಗಾಗಿ ಸೋಮವಾರ ವಿಕ್ಟೋರಿಯಾ ಆಸ್ಪತ್ರೆಯ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಸುಮಾರು 60ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್‌ಗಳಲ್ಲಿ ಭಾಗಿಯಾಗಿರುವ ರವಿ ಪೂಜಾರಿ ಮೇಲೆ ಕರ್ನಾಟಕ, ಮಹಾರಾಷ್ಟ್ರ, ಕೇರಳ ಸೇರಿ ಹಲವೆಡೆ ಕೇಸ್ ದಾಖಲಾಗಿದ್ದಾವೆ. ಈ ಪ್ರಕರಮದಲ್ಲಿ ಪೊಲೀಸರು ಬಂಧಿಸಿದ್ದರು.

ಭೂಗತವಾಗಿದ್ದುಕೊಂಡೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರವಿ ಪೂಜಾರಿಯನ್ನು ಅರೆಸ್ಟ್ ಮಾಡಲು ಭಾರತದ ತನಿಖಾ ಸಂಸ್ಥೆಗಳು ಸೆನೆಗಲ್ ದೇಶದೊಂದಿಗೆ ಸಂಪರ್ಕದಲ್ಲಿದ್ದವು.

ಈ ಹಿನ್ನಲೆಯಲ್ಲಿ 2019 ರಲ್ಲಿ ಸೆನೆಗಲ್ ಪೊಲೀಸರು ರವಿ ಪೂಜಾರಿಯನ್ನು ಬಂಧಿಸಲಾಗಿತ್ತು. ವಿಚಾರಣೆ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

About The Author

Leave a Reply