January 16, 2026
WhatsApp Image 2024-06-16 at 12.07.47 PM

ಬಳ್ಳಾರಿ: ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ, ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ಪಾಲಿಸಬೇಕು ಎಂದು ಬಳ್ಳಾರಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಹೇಳಿದರು.

ಶನಿವಾರ ಅವರು ತಮ್ಮ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಜಿ. ಖಲೀಲ್ ಸಾಬ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರಮೋದ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕರು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

 

ಕಾನೂನು ಬಾಹಿರವಾಗಿ ಯಾರಾದರೂ ಒಂಟೆ, ಗೋಹತ್ಯೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ, ಪಶುಸಂಗೋಪನೆ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯತಿಗಳಿಗೆ ಮಾಹಿತಿಯನ್ನು ನೀಡಬಹುದು ಎಂದು ತಿಳಿಸಿದರು.

About The Author

Leave a Reply