ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್‌ ಸೇರಿ 17 ಆರೋಪಿಗಳ ಬಂಧನ : ಕಮಿಷನರ್‌ ದಯಾನಂದ್‌ ಮಾಹಿತಿ

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್‌ ಸೇರಿದಂತೆ ಈವರೆಗೆ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮಿಷನರ್ ದಯಾನಂದ್,‌ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ.

ವ್ಯಕ್ತಿಯ ಕೊಲೆ ಮಾಡಿರುವುದು ಹೀನ, ಅತ್ಯಂತ ಹೇಯ ಕೃತ್ಯ. ಮೃಇತ ರೇಣುಕಾಸ್ವಾಮಿ ಕುಟುಂಬಕ್ಕೆ ನಾವು ನ್ಯಾಯ ದೊರಕಿಸಿಕೊಡಬೇಕಿದೆ. ಪ್ರಕರಣ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸವಾಗುತ್ತಿದೆ ಎಂದು ಹೇಳಿದರು.

ಪೊಲೀಸರ ಸಮಯ ಪ್ರಜ್ಞೆಯಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಬೇರೆ ಬೇರೆ ಆಯಾಮಗಳಲ್ಲಿಯೂ ತನಿಖೆ ನಡೆಯುತ್ತಿದೆ. ಸಮರ್ಪಕವಾದ ರೀತಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ವಿವರಗಳನ್ನು ನಾವು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Leave a Reply