ಮಂಜೇಶ್ವರ: ಆರೋಗ್ಯ ಅಧಿಕಾರಿರೋರ್ವರು ವಾಸಸ್ಥಳದ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳವಾರ ಸಂಜೆ ಬೆಳಕಿಗೆ ಬಂದಿದೆ. ಪತ್ತನಂತ್ತಿಟ್ಟದ ಮನೋಜ್ (45) ಮೃತಪಟ್ಟವರು.
ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಕಲ್ಯಾಣ ಕೇಂದ್ರದ ಆರೋಗ್ಯಾಧಿಕಾರಿ ಆಗಿದ್ದರು. ಮಂಜೇಶ್ವರ ಎಸ್ ಐ ಟಿ ಶಾಲಾ ಸಮೀಪದ ವಸತಿ ಗೃಹ ದಲ್ಲಿ ವಾಸವಾಗಿದ್ದರು ದುರ್ವಾಸನೆ ಕಂಡು ಬಂದ ಹಿನ್ನಲೆಯಲ್ಲಿ ಪರಿಸರ ವಾಸಿಗಳು ಗಮನಿಸಿದಾಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಒಬ್ಬರು ಮಾತ್ರ ಈ ಕೊಠಡಿಯಲ್ಲಿದ್ದರು ಎನ್ನಲಾಗಿದೆ.
ಹೃದಯಘಾತದಿಂದ ಮೃತಪಟ್ಟಿರಹುದು ಎಂದು ಶಂಕಿಸಲಾಗಿದೆ. ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ ಮಂಜೇಶ್ವರ ಠಾಣಾ ಪೊಲೀಸರು ಮಹಜರು ನಡೆಸಿದರು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಎರಡು ತಿಂಗಳ ಹಿಂದೆ ಮಂಜೇಶ್ವರದಲ್ಲಿ ಅರೋಗ್ಯ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.