
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೆ ಪೊಲೀಸ್ ಕಸ್ಟಡಿ ಅವಧಿ ವಿಸ್ತರಿಸಲಾಗಿದ್ದರೆ, ಪವಿತ್ರಾ ಗೌಡಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಜೈಲುಪಾಲಾಗಿದ್ದಾರೆ.



ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಗ್ಯಾಂಗ್ ನ ಪೊಲೀಸ್ ಕಸ್ಟಡಿ ಇಂದು ಮುಗಿದ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲಿಸರು 13 ಆರೋಪಿಗಳನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು.
ಈ ವೇಳೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಮತ್ತೆ ಕಸ್ಟಡಿಗೆ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ , ಧನರಾಜ್, ವಿನಯ್, ಪ್ರದೋಶ್ ಸೇರಿ ನಾಲ್ವರು ಆರೋಪಿಗಳನ್ನು ಮತ್ತೆ 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಇದೇ ವೇಳೆ ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಸೇರಿದಂತೆ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದ್ದು, ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾಳೆ.