Visitors have accessed this post 1603 times.

ಪ್ರಮಾಣ ವಚನ ಸ್ವೀಕರಿಸಿ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ಸಿಟಿ ರವಿ

Visitors have accessed this post 1603 times.

ಬೆಂಗಳೂರು : ಕರ್ನಾಟಕದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ವಿಧಾನಸೌಧಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ನೂತನ ಪರಿಷತ್ ಸದಸ್ಯರಿಗೆ ಸಭಾಪತಿ ಬಸವರಾಜ್ ಹೊರಟ್ಟಿ ಪ್ರಮಾಣ ವಚನ ಬೋಧಿಸಿದರು ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್‌ಕೆ ಪಾಟೀಲ್ ಸೇರಿ ಹಲವರು ಭಾಗಿಯಾದರು. ಇದರೊಂದಿಗೆ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ 11 ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವೂ ನಡೆಯಿತು.

ಪಕ್ಷಾತೀತವಾಗಿ ಸಿದ್ದರಾಮಯ್ಯ ಕಾಲಿಗೆ ಬಿದ್ದ ನೂತನ ಸದಸ್ಯರು!

ಇನ್ನು ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ವೇಳೆ ಅನೇಕ ಸದಸ್ಯರು ಪಕ್ಷಾತೀತವಾಗಿ ಸಿಎಂ ಸಿದ್ದರಾಮಯ್ಯ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಕೇಸರಿ ಶಾಲು ಧರಿಸಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಜೈ ಶ್ರೀರಾಮ್ ಎಂದು ಶಿಳ್ಳೆ ಕೇಕೆ ಹಾಕಿ ಬಿಜೆಪಿ ಸದಸ್ಯರು ಘೋಷಣೆ ಕೂಗಿ ಅಭಿನಂದಿಸಿದರು. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನೇರವಾಗಿ ಸಿಎಂ ಸಿದ್ದರಾಮಯ್ಯ ಬಳಿ ಬಂದ ಸಿ.ಟಿ ರವಿ, ಸಿದ್ದರಾಮಯ್ಯ ಕಾಲು ಮುಟ್ಟಿ ನಮಸ್ಕರಿಸಿದರು. ಈ ವೇಳೆ ಸಿಟಿ ರವಿಯ ಕಿವಿ ಹಿಂಡಿದ ಸಿಎಂ ಬೆನ್ನು ತಟ್ಟಿ ಅಭಿನಂದಿಸಿದರು. ನಂತರ ಭಾರತ ಮಾತೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಪರಿಷತ್ ಸದಸ್ಯ ಎನ್ ರವಿಕುಮಾರ್‌ ಬಳಿಕ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಮತ್ತೊಂದೆಡೆ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಎಸ್‌ ಸದಸ್ಯ ಭೋಜೇಗೌಡ, ನಂತರ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದರು.

ಇತ್ತ ಭಗವಂತ ಹಾಗೂ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಯತೀಂದ್ರ ಸಿದ್ದರಾಮಯ್ಯ, ಬಳಿಕ ಅಪ್ಪ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಇದೇ ವೇಳೆ ನೂತನ ಸದಸ್ಯ ಕೆ ಗೋವಿಂದ ರಾಜ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಜಗದೇವ್ ಗುತ್ತೆದಾರ್ ಅವರು ಬುದ್ಧ ಬಸವ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

Leave a Reply

Your email address will not be published. Required fields are marked *