ಪ್ರತಿ ಲೀಟರ್ ‘ಹಾಲಿಗೆ’ 2.10 ರೂ ಹೆಚ್ಚಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ..!

ಬೆಂಗಳೂರು: ರಾಜ್ಯದ ಜನತೆಗೆ ಮತ್ತೆ ಬೆಲೆ ಏರಿಕೆ ಬಿಸಿತಟ್ಟಿದೆ. ಮೊನ್ನೆತಾನೇ ಪೆಟ್ರೋಲ್‌, ಡಿಸೇಲ್‌ ಮೇಲಿನ ಸೆಸ್‌ ದರವನ್ನು ಹೆಚ್ಚಿದ ರಾಜ್ಯ ಸರ್ಕಾರ ಈಗ ಮತ್ತೆ ಹಾಲಿನ ದರವನ್ನು ಹೆಚ್ಚಿಸಿ ಆದೇಶವನ್ನು ಹೊರಡಿಸಿದೆ.

ಪ್ರತಿ ಲೀಟರ್‌ ಹಾಲಿನ ದರವನ್ನು 2.10 ರೂಗೆ ಹೆಚ್ಚಿಸಿ ಕೆಎಂಎಫ್‌ ಹೆಚ್ಚಿಸಿ ಆದೇಶ ಹೊರಡಿಸಿದೆ.

ಇದರೊಂದಿಗೆ ಮೊದಲೇ ಬೆಲೆ ಏರಿಕೆಯ ಬಿಸಿಯಲ್ಲಿರುವ ರಾಜ್ಯದ ಜನತೆ ಮತ್ತೆಕಿಸೆಗೆ ಬಾರವಾಗುವುದರಲ್ಲಿ ಅನುಮಾನವಿಲ್ಲ. ದರ ವಿಚಾರವಾಗಿ ಆಗುತ್ತಿರುವ ನಷ್ಟದ ಬಗ್ಗೆ ಸಭೆಯಲ್ಲಿ ಒಕ್ಕೂಟಗಳು ತಮ್ಮ ಸಮಸ್ಯೆಯನ್ನು ಸಿಎಂ ಮುಂದೆ ಹೇಳಿಕೊಂಡಿದ್ದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ಹಾಲಿನ ಬೆಲೆ ಏರಿಕೆಗೆ ಗ್ರೀನ್‌ ಸಿಗ್ನಲ್‌ ನೀಡಿದ ಹಿನ್ನಲೆಯಲ್ಲಿ ಈಗ ಕೆ.ಎಂಎಫ್ ಅಧಿಕೃತ ಆದೇಶವನ್ನು ಹೊರಡಿಸಿದೆ. ಪಂಚಗ್ಯಾರಂಟಿಗಳಿಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಪರದಾಡುತ್ತಿದೆ ಅಂಥ ಹೇಳಲಾಗುತ್ತಿದ್ದು, ಹೆಚ್ಚುವರಿ ಹಣವನ್ನು ಸಂಗ್ರಹಿಸಲು ರಾಜ್ಯದ ಜನತೆ ಮೇಲೆ ರಾಜ್ಯ ಸರ್ಕಾರ ಈ ರೀತಿ ಕೆಲಸವನ್ನು ಮಾಡುತ್ತಿದೆ ಅಂಥ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ

Leave a Reply