Visitors have accessed this post 1253 times.
ಉಳ್ಳಾಲ: ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಮನೆಯೊಳಗೆ ವಾಸ್ತವ್ಯ ವಿದ್ದ ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತ ದುರ್ದೈವಿಗಳು.
ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣ ಕಾರ್ಯಾಚರಣೆ ನಡೆಸಲಾಗಿದೆ. ಇಬ್ಬರ ಶವಗಳನ್ನು ಹೊರ ತೆಗೆಯಲಾಗಿದೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಕಂಪೌಂಡ್ ಕುಸಿದು ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸ್ಥಳೀಯರು ಮೂವರ ಮೃತದೇಹಗಳನ್ನು ಹೊರತೆಗೆದಿದ್ದು ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.