ಕುಂಬಳೆ: ಪತ್ನಿಯ ಸೀಮಂತಕ್ಕಾಗಿ ವಿದೇಶದಿಂದ ಊರಿಗೆ ಬಂದಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು

ಕಾಸರಗೋಡು: ಎರಡು ದಿನಗಳ ಹಿಂದೆಯಷ್ಟೇ ಪತ್ನಿಯ ಸೀಮಂತ ಕಾರ್ಯಕ್ರಮಕ್ಕಾಗಿ ಕೊಲ್ಲಿಯಿಂದ ಊರಿಗೆ ಬಂದಿದ್ದ ಯುವಕ ಬೈಕ್‌ ಅಪಘಾತದಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಬಂಬ್ರಾಣ ಉಜಾರು ನಿವಾಸಿ ದಿ|ಅಮ್ಮು ಶೆಟ್ಟಿ ಅವರ ಪುತ್ರ ಅಜಿತ್‌ ಶೆಟ್ಟಿ(32) ಸಾವಿಗೀಡಾದವರು.

ಜೂ.24 ರಂದು ರಾತ್ರಿ 9.30ಕ್ಕೆ ಆರಿಕ್ಕಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್‌ ಅಪಘಾತದಲ್ಲಿ ಈ ಸಾವು ಸಂಭವಿಸಿದೆ.

ಅವರು ಕತಾರ್‌ನಲ್ಲಿ ಉದ್ಯೋಗದಲ್ಲಿದ್ದರು. ಜೂ. 22ರಂದು ಊರಿಗೆ ಬಂದಿದ್ದರು. ಜೂ. 23ರಂದು ಪತ್ನಿಯ ಸೀಮಂತ ಕಾರ್ಯಕ್ರಮ ನಡೆದಿತ್ತು. ಜೂ. 24ರಂದು ರಾತ್ರಿ ಕುಂಬಳೆ ಪೇಟೆಗೆ ಬಂದ ಅಜಿತ್‌ ಶೆಟ್ಟಿ ಆಹಾರ ವಸ್ತುಗಳನ್ನು ಖರೀದಿಸಿ ಬುಲೆಟ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಆರಿಕ್ಕಾಡಿ ಶ್ರೀ ಹನುಮಾನ್‌ ದೇವಸ್ಥಾನ ಸಮೀಪ ಬೈಕ್‌ ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಹಾಗು ಇತರ ಪ್ರಯಾಣಿಕರು ಕುಂಬಳೆಯ ಜಿಲ್ಲಾ ಸರಕಾರಿ ಆಸ್ಪತ್ರೆಗೆ ತಲುಪಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದರು. ಮೃತರು ತಾಯಿ, ಪತ್ನಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Leave a Reply