18ನೇ ಲೋಕಸಭೆಯ ವಿಪಕ್ಷ ನಾಯಕನಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಯ್ಕೆಯಾಗಿರುವುದಾಗಿ ವರದಿಯಾಗಿದೆ.
ದೆಹಲಿಯಲ್ಲಿ ಇತ್ತೀಚೆಗೆ ಕಾಂಗ್ರೆಸ್‌ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಈ ಸಭೆಯ ಬಳಿಕ ಮಾತನಾಡಿದ್ದ ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, “ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ಸರ್ವಾನುಮತದಿಂದ ರಾಹುಲ್ ಗಾಂಧಿಯವರಿಗೆ ಮನವಿ ಮಾಡಲಾಗಿದೆ” ಎಂದು ತಿಳಿಸಿದ್ದರು.ಇಂದು(ಜೂನ್ 25) ಕೂಡ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆಸಲಾಗಿತ್ತು. ಈ ಸಭೆಯ ಬಳಿಕ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, “ಉತ್ತರ ಪ್ರದೇಶದ ರಾಯ್‌ಬರೇಲಿಯ ಸಂಸದರಾಗಿರುವ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿಪಕ್ಷ ನಾಯಕನಾಗಿ ನೇಮಿಸಲಾಗಿದೆ. ಈ ಬಗ್ಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರಿಗೆ ಮಾಹಿತಿ ನೀಡಲಾಗುವುದು” ಎಂದು ತಿಳಿಸಿದ್ದಾರೆ.
आज कांग्रेस अध्यक्ष श्री @kharge और श्री @RahulGandhi की मौजूदगी में INDIA गठबंधन के फ्लोर लीडर्स की बैठक हुई।
इस बैठक में INDIA गठबंधन के वरिष्ठ नेता मौजूद रहे।
📍 नई दिल्ली pic.twitter.com/wo8bAnPFrZ
— Congress (@INCIndia) June 25, 2024