November 8, 2025
WhatsApp Image 2024-06-28 at 9.04.20 AM

ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ 13ಕ್ಕೂ ಹೆಚ್ಚು ಜನರು ಮೃತಪಟ್ಟ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ತಡರಾತ್ರಿ ಸುಮಾರು 3.30ರ ವೇಳೆಗೆ ನಡೆದಿದೆ.

ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು, ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದೆ.

 

ಘಟನೆಯ ಪರಿಣಾಮ ಟಿಟಿ ವಾಹನ ನುಜ್ಜು ಗುಜ್ಜಾಗಿದ್ದು, ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿದೆ ಎಂದು ತಿಳಿದು ಬಂದಿದೆ.

ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಹೊರ ತೆಗೆದಿದ್ದು, ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದವರು ಎನ್ನಲಾಗಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿದ್ದ ಭಕ್ತರು ಭದ್ರಾವತಿಗೆ ಮರಳಿ ಹೋಗುತ್ತಿರುವಾಗ ಈ ರಸ್ತೆ ಆಪಘಾತ ಸಂಭವಿಸಿದೆ.

About The Author

Leave a Reply