February 4, 2026
WhatsApp Image 2024-06-28 at 1.15.39 PM

ಉಚ್ಚಿಲ ಬಟ್ಟಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ನಿನ್ನೆ ಮನೆಯೊಂದು ಸಮುದ್ರಪಾಲಾಗಿದೆ. ಈ ಮನೆಯಲ್ಲಿ ನೆಲೆಸಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಬುಧವಾರವೇ ಸ್ಥಳಾಂತರ ಮಾಡಿದ್ದರಿಂದ ಅಪಾಯ ತಪ್ಪಿದೆ. ಈ

ಪ್ರದೇಶದಲ್ಲಿ ಅಪಾಯದಂಚಿನಲ್ಲಿರುವ ಮೂರು ಮನೆಗಳ ಕುಟುಂಬಗಳ ಸದಸ್ಯರನ್ನು ನಿನ್ನೆ ಅಧಿಕಾರಿಗಳು ಸ್ಥಳಾಂತರಿಸಿದ್ದಾರೆ.
ಬಟ್ಟಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದರಿಂದ ಸೋಮೇಶ್ವರ ಪುರಸಭಾ ಮುಖ್ಯಾಧಿಕಾರಿ ಮತ್ತಡಿ, ತಹಶೀಲ್ದಾರ್‌ ಪ್ರದೀಪ್‌ ಕುರ್ಡೇಕರ್‌ ಸಹಿತ ಅಧಿಕಾರಿಗಳು ತೆರಳಿ ಬೀಫಾತುಮ್ಮ ಅವರಲ್ಲಿ ಮನೆ ಸ್ಥಳಾಂತರಕ್ಕೆ ಸೂಚನೆ ನೀಡಿದ್ದರು.

About The Author

Leave a Reply