November 8, 2025
WhatsApp Image 2024-06-29 at 11.00.41 AM

ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ಬಾಲಕಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಕಲಬುರಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ತೀವ್ರ ರಕ್ತಸ್ರಾವವಾಗಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು, ಸಂತ್ರಸ್ತೆಯ ಸಂಬಂಧಿಕರು ಮತ್ತು ದಲಿತ ಸೇನೆಯ ಕಾರ್ಯಕರ್ತರು ಆಸ್ಪತ್ರೆಯ ಎದುರು ರಸ್ತೆ ತಡೆದು ಪ್ರತಿಭಟಿಸಿ ಪೋಲಿಸರು ಸಮರ್ಪಕವಾಗಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿ, ಅವರಿಗೆ ಎನ್‍ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿದರು.

ʼಐದರಿಂದ ಏಳು ಜನರ ಗುಂಪು ಮನೆಗೆ ಬಂದು ಕಳೆದ ಎಂಟು ತಿಂಗಳಲ್ಲಿ ಹಲವು ಬಾರಿ ಮಗಳನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾರೆʼ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.

ಸಂತ್ರಸ್ತೆ ಎಂಟು ತಿಂಗಳ ಗರ್ಭಿಣಿಯಾಗಿದ್ದು, ಗುರುವಾರ ತಡರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಫಲಿಸದೆ ಮೃತಪಟ್ಟಿದ್ದಾಳೆ ಎಂದು ಉಪ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಕನಿಕಾ ಸಿಕ್ರಿವಾಲ್ ತಿಳಿಸಿದ್ದಾರೆ. 

ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ 2012ರ ಮಕ್ಕಳ ಲೈಂಗಿಕ ಅಪರಾಧ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

About The Author

Leave a Reply