Visitors have accessed this post 1389 times.

ಗುಡ್‌ ನ್ಯೂಸ್‌ : ʻಗೃಹಲಕ್ಷ್ಮಿʼ ಹಣ ಖಾತೆಗೆ ಜಮಾ

Visitors have accessed this post 1389 times.

ಬೆಂಗಳೂರು : ರಾಜ್ಯ ಸರ್ಕಾರವು ಯಜಮಾನಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಹಣ ಬಾರದೇ ಇರುವ ಯಜಮಾನಿಯರ ಖಾತೆಗೆ ಇಂದು 2,000 ರೂ. ಕ್ರೆಡಿಟ್‌ ಆಗಲಿದೆ. ಯಜಮಾನಿಯರು ತಪ್ಪದೇ ಬ್ಯಾಂಕ್‌ ಖಾತೆ ಚೆಕ್‌ ಮಾಡಿಕೊಳ್ಳಿ.

ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌, ಮೇ, ಜೂನ್‌ ತಿಂಗಳ ಹಣ ಹಾಕಿದ್ದೇವೆ.

ಇಂದು ಅಥವಾ ನಾಳೆ ಯಜಮಾನಿಯರ ಖಾತೆಗೆ ಹಣ ಕ್ರೆಡಿಟ್‌ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ನಿಲ್ಲುವುದಿಲ್ಲ. ಐದು ವರ್ಷಗಳ ವರೆಗೂ ಗೃಹಲಕ್ಷ್ಮಿ ಯೋಜನೆ ಇರಲಿದೆ. ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಇಲಾಖೆಯಿಂದ ಗೃಹಲಕ್ಷ್ಮಿ ಹಣ ಖಾತೆಗೆ ಹಾಕುವ ಕೆಲಸ ನಡೆಯುತ್ತಿದ್ದು, ಇಂದು ಅಥವಾ ನಾಳೆ ಖಾತೆಗೆ ಹಣ ಜಮಾ ಆಗಲಿದೆ ಎಂದು ಹೇಳಿದ್ದಾರೆ.

ಹಣ ಬಾರದಿದ್ದರೆ ಯಜಮಾನಿಯರು ತಪ್ಪದೇ ಈ ಕೆಲಸ ಮಾಡಿ

ಗೃಹಲಕ್ಷ್ಮಿ ಹಣ ಹಣ ಬಾರದೇ ಇರುವ ಫಲಾನುಭವಿಗಳು ತಪ್ಪದೇ ಈ ಕೆಲಸ ಮಾಡಿದ್ರೆ ಖಾತೆಗೆ ಒಟ್ಟಿಗೆ ಹಣ ಜಮಾ ಆಗಲಿದೆ.

ರಾಜ್ಯ ಸರ್ಕಾರವು ಮೊದಲಿಗೆ ಪೆಂಡಿಂಗ್(Gruhalakshmi Pending Money)ಇರುವ ಎಲ್ಲಾ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಿದ ಬಳಿಕ 11 ನೇ ಕಂತಿನ ಹಣವನ್ನ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.

ಇನ್ನೂ ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು. ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್‌ಡೇಟ್‌ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುವುದು ಎನ್ನಲಾಗಿದೆ.

Leave a Reply

Your email address will not be published. Required fields are marked *