ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್‌ಬ್ಯಾಗ್‌ ಕಳವು…!

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸುಮಾರು 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್‌ಬ್ಯಾಗ್‌ ಕಳವಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಮಹಿಳೆಯೋರ್ವರು ನಗರದ ಬ್ಯಾಂಕ್‌ನ ಲಾಕರ್‌ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು ಕೌಟುಂಬಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮನೆಗೆ ತಂದು ಹ್ಯಾಂಡ್‌ಬ್ಯಾಗ್‌ನಲ್ಲಿ ಹಾಕಿ ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ಐರಾವತ ಬಸ್‌ನಲ್ಲಿ ಇತರ ಲಗೇಜ್‌ ಜತೆ ತೆಗೆದುಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದರು ಎನ್ನಲಾಗಿದೆ.
ಹಾಸನ ತಲುಪಿದಾಗ ಅವರ ಹ್ಯಾಂಡ್‌ಬ್ಯಾಗ್‌ ಪರಿಶೀಲಿಸಿದಾಗ ಚಿನ್ನಾಭರಣಗಳು ಕಳವಾಗಿದ್ದವು. ಮಂಗಳೂರು – ಹಾಸನ ನಡುವೆ ಅವರ ಪಕ್ಕದಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ನಡು ವಯಸ್ಸಿನ ಮಹಿಳೆ ಕಳವು ಮಾಡಿರಬಹುದೆಂದು ಉರ್ವ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Leave a Reply