Visitors have accessed this post 721 times.

ಹೊಸ BPL, APL ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಇಂದು, ನಾಳೆ ಅರ್ಜಿ ಸಲ್ಲಿಕೆ-ತಿದ್ದುಪಡಿಗೆ ಅವಕಾಶ

Visitors have accessed this post 721 times.

ಬೆಂಗಳೂರು: ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ, ಇಂದು, ನಾಳೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ಈ ಬಗ್ಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಅಂತ ತಿಳಿಸಿದೆ.

 

ದಿನಾಂಕ 02-07-2024 ರಿಂದ ದಿನಾಂಕ 03-07-2024ರವರೆಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಅಂತ ಮಾಹಿತಿ ನೀಡಿದೆ.

ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸಂಜೆ 4 ಗಂಟೆಯಿಂದ 6 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ರಾಜ್ಯದ ಜನರು ಅವಕಾಶವನ್ನು ಬಳಸಿಕೊಳ್ಳುವಂತೆ ತಿಳಿಸಿದೆ.

Leave a Reply

Your email address will not be published. Required fields are marked *