ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿರುವ ಘಟನೆ ನಗರದ ಬಲ್ಮಠ ರೋಡ್‌ ಸಮೀಪ ನಡೆದಿದೆ. ಕಟ್ಟದ ನಿರ್ಮಾಣದ ವೇಳೆ ಘಟನೆ ನಡೆದಿದ್ದು, ಮಣ್ಣಿನಡಿಗೆ ಸಿಲುಕಿರುವ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಚರಣೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್‌ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave a Reply