
ಬೆಂಗಳೂರು: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆಪ್ಟಂಬರ್ 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ಮಾಹಿತಿ ತಿಳಿಸಿದರು.



ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು.
ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.