ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ಸ್ಥಗಿತ

ಬೆಂಗಳೂರು: ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷಿಯ ಭಾರತ್‌ ರೈಸ್‌ (Bharat Rice) ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್‌ ರೈಸ್‌ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು.ಈ ಯೋಜನೆಯ ಅಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ ಮಾಡಲಾಗುತ್ತಿತ್ತು. ಜನ ಸಂದಣಿ ಹೆಚ್ಚಿನ ಜಾಗಗಳಲ್ಲಿ ಮೊಬೈಲ್‌ ವ್ಯಾನ್‌ ಮೂಲಕ ಅಕ್ಕಿ, ಬೆಳೆಗಳನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್ 10 ರವರೆಗೆ ಕೇಂದ್ರ ಸರ್ಕಾರ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.ಯಾವ ಕಾರಣಕ್ಕೆ ಮಾರಾಟವನ್ನು ಸ್ಥಗಿತ ಮಾಡಲಾಗಿದೆ ಎನ್ನುವುದು ತಿಳಿದುಬಂದಿಲ್ಲ. ಭಾರತ್ ರೈಸ್‌ಗೆ ಗ್ರಾಹಕರಿಂದ ಬೇಡಿಕೆ ಇತ್ತು. ಇದುವರೆಗೂ 5 ಸಾವಿರ ಟನ್ ಮಾರಾಟ ಮಾಡಲಾಗಿದೆ

Leave a Reply