November 28, 2025
004

ಡುಪಿ : ಕಳೆದ ವರ್ಷ ವಿದ್ಯಾರ್ಥಿಗಳ ಕೈಯಲ್ಲಿ ಸರ್ಕಾರಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ವಿಚಾರ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ ಅಂತದ್ದೆ ಘಟನೆ ಉಡುಪಿಯಲ್ಲಿ ನಡೆದಿದ್ದು ಅನುದಾನಿತ ಶಾಲೆಯಲ್ಲಿ ವಿದ್ಯಾರ್ಥಿಯಿಂದ ದೈಹಿಕ ಶಿಕ್ಷಕನ ಭಾಷಾ ಶಾಲೆಯ ಸ್ವಚ್ಛಗೊಳಿಸಿರುವ ಅಮಾನವ ಘಟನೆ ಬೆಳಕಿಗೆ ಬಂದಿದೆ.

 

ಹೌದು ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ದೈಹಿಕ ಶಿಕ್ಷಣಕ್ಕನೊಬ್ಬ ವಿದ್ಯಾರ್ಥಿಯಿಂದ ಶೌಚಾಲಯವನ್ನು ಸ್ವಚ್ಛಗೊಳಿಸಿರುವ ಘಟನೆ ಉಡುಪಿ ಜಿಲ್ಲೆಯ ನಿಟ್ಟೂರು ತಾಲೂಕಿನ ಅನುದಾನಿತ ಶಾಲೆಯಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ.

ದೈಹಿಕ ಶಿಕ್ಷಕನೊಬ್ಬ ವಿದ್ಯಾರ್ಥಿಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಾನೆ.ಉಡುಪಿಯ ಶಾಲೆ ಒಂದರಲ್ಲಿ ಈ ಒಂದು ಘಟನೆ ನಡೆದಿದೆ. ನಿಟ್ಟೂರು ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಬಾಲಕನಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ದೃಶ್ಯ ಇದೀಗ ವೈರಲ್ ಆಗಿದೆ.

ಅಲ್ಲದೆ ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಸತಿ ಶಾಲೆ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ ನಡೆದಿತ್ತು.

ಅದಾದ ಬಳಿಕ ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ್ಲೇ ಶೌಚಾಲಯ ಕ್ಲೀನ್ ಮಾಡಿಸಲಾಗಿತ್ತು. ನಂತರ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡ್ಡದ ನೇರಳೆಕೆರೆ ಗ್ರಾಮದ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ ವರದಿಯಾಗಿತ್ತು.

About The Author

Leave a Reply