October 27, 2025
WhatsApp Image 2024-05-23 at 4.36.36 PM

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಮತ್ತು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ತಮ್ಮ ವಿರುದ್ದ ದಾಖಲಾದ ಎರಡು ಪ್ರಕರಣ ರದ್ದುಗೊಳಿಸಿ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ.

ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ್ದ ಅರ್ಜಿಯ ವಿಚಾರಣೆಯೂ ಜೂ.5 ರಂದುಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

About The Author

Leave a Reply