
ಮಂಗಳೂರು(ಇಟ್ಟಿಕುಳಂ): ಉಳ್ಳಾಲ ಖಾಝಿ ಸಯ್ಯದ್ ಫಝಲ್ ಕೋಯಮ್ಮ ತಂಜಳ್ ನಿಧನರಾಗಿದ್ದಾರೆ. ಕಣ್ಣೂರಿನ ಇಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾಲ ಖಾಝಿಯಾಗಿದ್ದ ಇವರು ಕೂರ ತಂಜಳ್ ಎಂದೇ ಪ್ರಸಿದ್ದರಾಗಿದ್ದರು. ಅಲ್ಪಕಾಲದಿಂದ ಅನಾರೋಗ್ಯದಿಂದಿದ್ದ ಅವರು ಇಂದು ಬೆಳಿಗ್ಗೆ ನಿಧರಾಗಿದ್ದಾರೆ. ಮೃತರು ಪತ್ನಿ ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಇಂದು ರಾತ್ರಿ 9 ಗಂಟೆ ವೇಳೆಗೆ ಕೂರ ಮಸೀದಿ ವಠಾರದಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ. ಸುಲ್ತಾನುಲ್ ಉಲಮಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ಇಂದು ಸಂಜೆ 5 ಗಂಟೆಗೆ ಕೂರ ಮಸೀದಿಯಲ್ಲಿ ನಡೆಯಲಿರುವ ಜನಾಝಾನಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.


