Visitors have accessed this post 721 times.

DC ಗಳು ಎಂದರೆ ಮಹಾರಾಜರಲ್ಲ: ಸಿ.ಎಂ ಸಿದ್ದರಾಮಯ್ಯ

Visitors have accessed this post 721 times.

ಬೆಂಗಳೂರು: ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

 

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು.

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದರು.

ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. DC, DHO ಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚಿಸಿದರು.

ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *