
ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ದಿಯಾ ಮಂಡೋಲ್ ಪಶ್ಚಿಮ ಬಂಗಾಳ ಮೂಲದವಳಾಗಿದ್ದು, ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು.



ಮೂರು ದಿನಗಳ ಹಿಂದೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ದಿಯಾ ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.