
ಬೆಂಗಳೂರು : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.



ಬಿ.ಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (41) ಆತ್ಮಹತ್ಯೆ ಮಾಡಿಕೊಂಡಿದ್ದು, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ರಸ್ತೆ ಬದಿ ಕಾರು ನಿಲ್ಲಿಸಿಕೊಂಡು ಪ್ರತಾಪ್ ಕುಮಾರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವಿಷ ಸೇವಿಸಿದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.