October 28, 2025
WhatsApp Image 2024-07-09 at 2.30.29 PM

ಮಂಗಳೂರು: ಭರತ್ ಶೆಟ್ಟಿ ಗಂಡು ಮಗ ಆಗಿದ್ದರೆ, ಅವರಿಗೆ ತಾಕತ್ತಿದ್ದರೆ ನಮ್ಮ ಸಾಮಾನ್ಯ ಕಾರ್ಯಕರ್ತನ ಮೇಲೆ ಕೈ ಹಾಕಿ ನೋಡಲಿ. ಆಮೇಲೆ ನೋಡೋಣ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ರಮಾನಾಥ ರೈ ಸವಾಲು ಹಾಕಿದ್ದಾರೆ.

ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭರತ್ ಶೆಟ್ಟಿ ಮೇಲೆ ಸರಕಾರ ಸುಮೋಟೋ ಪ್ರಕರಣ ದಾಖಲಿಸಬೇಕು ಎಂದರು. ಭರತ್ ಶಾಸಕನಾಗಲು ನಾಲಾಯಕ್. ಯೋಗ್ಯತೆ ಇಲ್ಲದ ಮನುಷ್ಯ. ಬಿಜೆಪಿ ವಚನ ಭ್ರಷ್ಟ ಎಂದು ಕುಮಾರ ಸ್ವಾಮಿ ಅಂದು ಹೇಳಿದಾಗ ಭರತ್ ಶೆಟ್ಟಿ ಜನತಾದಳ ಪಕ್ಷದಲ್ಲಿದ್ದ. ಅಮರನಾಥ್ ಶೆಟ್ಟಿಯವರ ಕೃಪಾ ಕಟಾಕ್ಷದಿಂದ ರಾಜಕೀಯದಲ್ಲಿ ಮೇಲೆ ಬಂದು ಅವರಿಗೆ ಕೈ ಕೊಟ್ಟಿದ್ದಾನೆ. ರಾಹುಲ್ ಗಾಂಧಿ ಬಗ್ಗೆ ಏಕವಚನದಲ್ಲಿ ಕೆಟ್ಟದಾಗಿ ಮಾತನಾಡುವುದು ಶೋಭೆ ತರುವುದಿಲ್ಲ. ರಾಹುಲ್ ಗಾಂಧಿ ಅವರನ್ನು ಭರತ್ ಶೆಟ್ಟಿ ಹುಚ್ಚ ಎಂದು ಹೇಳಿದ್ದು, ಆ ಹುಚ್ಚ ಯಾರು ಎಂದು ಅವರ ನಾಯಕರ ಕಟೌಟ್ ನಲ್ಲಿ ಅವರ ವೇಷ ಭೂಷಣ ನೋಡಿದಾಗ ತಿಳಿಯುತ್ತೆ ಎಂದು ವಾಗ್ದಾಳಿ ನಡೆಸಿದರು.

46 ನೇ ಶಂಕರಾಚಾರ್ಯ ಪೀಠದ ಸ್ವಾಮೀಜಿಯವರೇ ʼರಾಹುಲ್ ಗಾಂಧಿ ಹೇಳಿಕೆಯನ್ನು ತಾನು ಪೂರ್ತಿ ಗಮನಿಸಿದ್ದು, ಅದರಲ್ಲಿ ಹಿಂದೂ ಸಮಾಜದಲ್ಲಿ ಹಿಂಸೆಗೆ ಅವಕಾಶವಿಲ್ಲ ಅಂದಿದ್ದಾರೆ ವಿನಹ, ಹಿಂದೂ ಸಮಾಜದ ವಿರೋಧ ಮಾತನಾಡಿಲ್ಲ. ರಾಹುಲ್ ಮಾತನ್ನು ಅಪಪ್ರಚಾರ ಮಾಡುವವರ ಮೇಲೆ ಶಿಕ್ಷೆ ಆಗಬೇಕುʼ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿಯ ಕಪಾಲಕ್ಕೆ ಹೊಡೆಯುವುದು ಎಂಬ ಹೇಳಿಕೆ, ಬಿಜೆಪಿಯು ಹಿಂಸೆಯನ್ನು ಪರೋಕ್ಷವಾಗಿ ಒಪ್ಪಿಕೊಂಡಂತೆ. ಬಿಜೆಪಿಯ ಈ ಹಿಂಸಾತ್ಮಕ ಪ್ರವೃತ್ತಿಯನ್ನೇ ರಾಹುಲ್ ಗಾಂಧಿ ಅವರು ವಿರೋಧಿಸಿ ಹೇಳಿಕೆ ನೀಡಿದ್ದು ಎಂದು ರಮಾನಾಥ ರೈ ಹೇಳಿದರು.

About The Author

Leave a Reply