
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ಹನ್ನೊಂದು ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ.
ಹರಿಯಾಣದ ಮೆಹನುವಾಡ್ ಜಿಲ್ಲೆಯ ನಗೀನ ತಾಲೂಕು ನಂಗಲ್ ಮವರಿಪುರ್ ಅಹಮ್ಮದ್ ಖಾನ್ ಅವರ ಪುತ್ರ ಮಹಮ್ಮದ್ ನಾಸೀರ್(35) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. 2013ರಲ್ಲಿ ನಡೆದ ಅಪರಾಧ ಪ್ರಕರಣವೊಂದಕ್ಕೆ ಪ್ರಕರಣ ದಾಖಲಿಸಿಕೊಂಡಿದ್ದರು.
ಕಳೆದ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕೆ ವಾರಂಟ್ ಜಾರಿಯಾಗಿತ್ತು. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.