
ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರ ಜೋರಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ.



ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದ ಯಶಸ್ವಿನಿ (೧೮) ಎಂಬ ಯುವತಿ ಡೆಂಗ್ಯೂ ಜ್ವರಕ್ಕೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಕಳೆದೊಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಯಶಸ್ವಿನಿಯನ್ನು ಗೌರಿಬಿದನೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಬಳಿಕ ಬೆಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ಯಶಸ್ವಿನಿ ಪ್ರಥಮ ವರ್ಷದ ಪದವಿ ತರಗತಿಗೆ ಪ್ರವೇಶ ಪಡೆದಿದ್ದರು.