August 30, 2025
WhatsApp Image 2024-07-14 at 11.34.51 AM

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 1-10ನೇ ತರಗತಿ ವಿದ್ಯಾರ್ಥಿಗಳಿಗೆ ವಾರವೀಡಿ ಮೊಟ್ಟೆ ವಿತರಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆಗೆ ರಜಾ ದಿನ ಹೊರತುಪಡಿಸಿ, ವಾರದ 6 ದಿನವೂ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ.

ಇನ್ನೊಂದು ತಿಂಗಳಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಮೊದಲು ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ವಾರಕ್ಕೊಮ್ಮೆ ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು 10ನೇ ತರಗತಿಯವರೆಗೆ ವಿಸ್ತರಿಸಿದೆ. ವಾರದಲ್ಲಿ ಒಂದು ದಿನದ ಬದಲು ಎರಡು ದಿನಕ್ಕೆ ಹೆಚ್ಚಿಸಲಾಗಿತ್ತು. ಇನ್ನು ವಾರವಿಡೀ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

About The Author

Leave a Reply