ಬೆಂಗಳೂರು : ರಾಜ್ಯ ವಕ್ಫ್ ಬೋರ್ಡ್‌ನಲ್ಲೂ ನಡೀತು ಕೋಟಿ-ಕೋಟಿ ಅಕ್ರಮ..!

ಬೆಂಗಳೂರು : ರಾಜ್ಯ ವಕ್ಫ್ ಬೋರ್ಡ್‌ನಲ್ಲಿ ಕೋಟಿ-ಕೋಟಿ ಹಣ ಅಕ್ರಮವಾಗಿರುವ ಕುರಿತು ಆರೋಪ ಕೇಳಿ ಬಂದಿದೆ. ವಕ್ಫ್ ಬೋರ್ಡ್ ಖಾತೆಯಿಂದ ಅಕ್ರಮವಾಗಿ 4 ಕೋಟಿ ವರ್ಗಾವಣೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹಮದ್ ದೂರು ನೀಡಿದ್ದಾರೆ. ವಕ್ಫ್ ಬೋರ್ಡ್‌ನ ಮಾಜಿ ಸಿಇಓ ಝುಲ್ಫಿಕಾರುಲ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಂಡಿರುವ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply