
ಅಂಕೋಲಾ: ತಾಲೂಕಿನಲ್ಲಿ ಕಳೆದೆರಡು ದಿನದಿಂದ ಅತಿ ಹೆಚ್ಚಿನ ಮಳೆಯಾಗುತ್ತಿದ್ದು, ಶಿರೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಉಂಟಾದ ಪರಿಣಾಮ ಎರಡು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಉರುಳಿ ಬಿದ್ದಿದ್ದು, ಗ್ಯಾಸ್ ಸೋರಿಕೆ ಸಾಧ್ಯತೆಗಳಿದ್ದು, ಗಂಗಾವಳಿ ನದಿ ಸುತ್ತಮುತ್ತಲಿನ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.



ಶಿರೂರು ಭಾಗದಿಂದ ಗಂಗಾವಳಿ ನದಿಯ ಮೂಲಕ ತೆಲುತ್ತಾ ಟ್ಯಾಂಕರ್ ವೊಂದು ಸಗಡಗೇರಿ ಬಳಿ ನಿಂತಿದ್ದು ಆ ಭಾಗದ ಉಳುವರೆ ಸಗಡಗೇರಿ ಶಿರೂರು ಹಾಗೂ ಇನ್ನಿತರ ಪ್ರದೇಶದ ಜನರಿಗೆ ಸ್ಥಳಾಂತರಿಸಲಾಗುತ್ತಿದೆ.
ಈ ಕುರಿತು ಅಧಿಕಾರಿಗಳಿಗೆ ತ್ವರಿತ ಕ್ರಮಕ್ಕೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ಭಾಗದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳ ಪ್ರಯತ್ನ ಮುಂದುವರೆದಿದೆ. ಜನರು ಇದಕ್ಕೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಕೇಳಿಕೊಂಡಿದ್ದಾರೆ.